ಬಸವಣ್ಣ   
  ವಚನ - 762     
 
ಲಿಂಗದಲ್ಲಿ ಸಮ್ಯಕ್ಕರು, ಲಿಂಗದಲ್ಲಿ ಸದರ್ಥರು, ಲಿಂಗದಲ್ಲಿ ಸೊಮ್ಮ- ಸಂಬಂಧವರಿತ ಸ್ವಾಮಿಭೃತ್ಯರೆಲ್ಲರೂ, ನಿಮ್ಮ ಬೇಡೆ ಅಂಜದಿರಿ! ಎನಗೆ ಮರ್ತ್ಯಲೋಕದ ಮಹಾಗಣಂಗಳುಂಟು, ಇದು ಕಾರಣ, ಕೂಡಲಸಂಗಮದೇವರ ಲೋಕವ ಹಂಚಿಕೊಳ್ಳಿ ನಿಮನಿಮಗೆ!