ಬಸವಣ್ಣ   
  ವಚನ - 768     
 
ಮುತ್ತು ನೀರಲ್ಲಿ ಹುಟ್ಟಿ ಮತ್ತೆ ನೀರಪ್ಪುದೆ? ಗುರುಕಾರುಣ್ಯವ ಹಡೆದ ಭಕ್ತನು ಹಿಂದಣ ಪೂರ್ವಾಶ್ರಯವ ಬೆರಸಿದರೆ, ಗುರುದ್ರೋಹ, ಲಿಂಗದ್ರೋಹ, ಜಂಗಮದ್ರೋಹ, ಆಚಾರದ್ರೋಹ, ಪ್ರಸಾದದ್ರೋಹ! ಇಂತೀ ಪಂಚಮಹಾಪಾತಕಂಗಳು ಭಕ್ತಂಗಲ್ಲದೆ ಭವಿಗೆಲ್ಲಿಯದೋ? ಗುರುವಿದು, ಲಿಂಗವಿದು, ಜಂಗಮವಿದು, ಆಚಾರವಿದು, ಪ್ರಸಾದವಿದೆಂದರಿಯದಿದ್ದರೆ ಕುಂಭೀಪಾತಕ ನಾಯಕನರಕ! ಕೂಡಲಸಂಗಮದೇವಾ.