ಬಸವಣ್ಣ   
  ವಚನ - 776     
 
ಒಪ್ಪವ ನುಡಿವರಯ್ಯಾ ತುಪ್ಪವ ತೊಡೆದಂತೆ! ಶರಣ ತನ್ನ ಮೆರೆವನೆ ಬಿನ್ನಾಣಿಯಂತೆ? ಕೂಡಲಸಂಗನ ಪ್ರಸಾದದಿಂದ ಬದುಕುವನಲ್ಲದೆ ತನ್ನ ಮೆರೆವನೆ?