ಬಸವಣ್ಣ   
  ವಚನ - 784     
 
ಶುದ್ಧವ ಗುರುವಿಂಗೆ ಕೊಟ್ಟು, ಶುದ್ಧವಾಯಿತ್ತೆಂಬೆನಯ್ಯಾ, ಸಿದ್ಧವ ಲಿಂಗಕ್ಕೆ ಕೊಟ್ಟು, ಸಿದ್ಧವಾಯಿತ್ತೆಂಬೆನಯ್ಯಾ. ಪ್ರಸಿದ್ಧವ ಜಂಗಮಕ್ಕೆ ಕೊಟ್ಟು, ಪ್ರಸಿದ್ಧವಾಯಿತ್ತೆಂಬೆನಯ್ಯಾ. ಗುರುಲಿಂಗಜಂಗಮವ ಏಕತ್ರಯವಾಗಿ ಕಾಣಲರಿಯದಿದ್ದರೆ ಶುದ್ಧ ಸಿದ್ಧ ಪ್ರಸಿದ್ಧ ಒಡನೆ ನಗುತ್ತಿದಾವೆ! ತನುಮನಧನವ ನಿವೇದಿಸಲರಿಯೆನಾಗಿ ಕೂಡಲಸಂಗಮದೇವ, ಒಲಿಯೆಂದೊಡೆಂತೊಲಿವ?