ಬಸವಣ್ಣ   
  ವಚನ - 799     
 
ಶ್ವಾನಜ್ಞಾನ, ಗಜಜ್ಞಾನ, ಕುಕ್ಕುಟಜ್ಞಾನವೆಂಬ ಜ್ಞಾನತ್ರಯಂಗಳೇನಾದುವು? ಕೂಡಲಸಂಗಮದೇವಾ, ನಿಮ್ಮನರಿಯದ ಜ್ಞಾನವೆಲ್ಲಾ ಅಜ್ಞಾನ!