ಬಸವಣ್ಣ   
  ವಚನ - 809     
 
ಚಂದ್ರಕಾಂತದ ಶಿಲೆಯಲ್ಲಿ ಜಲವಿಲ್ಲದನ್ನಕ್ಕ ಶೈತ್ಯವ ತೋರುವ ಪರಿಯೆಂತೋ? ಸೂರ್ಯಕಾಂತದ ಶಿಲೆಯಲ್ಲಿ ಅಗ್ನಿಯಿಲ್ಲದನ್ನಕ್ಕ ಉಷ್ಣವ ತೋರುವ ಪರಿಯೆಂತೊ? ಶರಣಂಗೆ ಭಕ್ತಿಕಾಯವಿಲ್ಲದನ್ನಕ್ಕ ಕೂಡಲಸಂಗಯ್ಯನನರಿವ ಪರಿಯೆಂತೋ?