ಬಸವಣ್ಣ   
  ವಚನ - 810     
 
ಮುನ್ನೂರರವತ್ತು ನಕ್ಷತ್ರಕ್ಕೆ ಬಾಯಿಬಿಟ್ಟುಕೊಂಡಿಪ್ಪುದೆ ಸಿಂಪು? ಅದು ಸ್ವಾತಿಗಲ್ಲದೆ ಬಾಯ್ದೆರೆಯದು ಕೇಳು, ಕೇಳಾ, ತಂದೇ: ಎಲ್ಲವಕ್ಕೆ ಬಾಯ ಬಿಟ್ಟರೆ ತಾನೆಲ್ಲಿಯ ಮುತ್ತಪ್ಪುದೊ? ಪರಮಂಗಲ್ಲದೆ ಹರುಷತಿಕೆಯಿಲ್ಲೆಂದು ಕರಣಾದಿ ಗುಣಂಗಳ ಮರೆದರು: ಇದು ಕಾರಣ, ಕೂಡಲಸಂಗನ ಶರಣರು ಸಪ್ತವ್ಯಸನಿಗಳಲ್ಲಾಗಿ.