ಬಸವಣ್ಣ   
  ವಚನ - 862     
 
ಕೆರೆ ಹಳ್ಳ ಬಾವಿಗಳು ಮೈದೆಗೆದರೆ ಗುಳ್ಳೆ ಗೊರಜೆ ಚಿಪ್ಪುಗಳು ಕಾಣಬಹುದು: ವಾರಿಧಿ ಮೈದೆಗೆದರೆ ರತ್ನಂಗಳು ಕಾಣಬಹುದು. ಕೂಡಲಸಂಗನ ಶರಣರು ಮನದೆರೆದು ಮಾತನಾಡಿದರೆ ಲಿಂಗವ ಕಾಣಬಹುದು!