ಬಸವಣ್ಣ   
  ವಚನ - 877     
 
ಸಮುದ್ರ ಘನವೆಂಬೆನೆ? ಧರೆಯ ಮೇಲಡಗಿತ್ತು. ಧರೆ ಘನವೆಂಬೆನೆ? ನಾಗೇಂದ್ರನೆ ಫಣಾಮಣಿಯ ಮೇಲಡಗಿತ್ತು. ನಾಗೇಂದ್ರ ಘನವೆಂಬೆನೆ? ಪಾರ್ವತಿಯ ಕಿರುಕುಣಿಕೆಯ ಮುದ್ರಿಕೆಯಾಗಿತ್ತು. ಅಂತಹ ಪಾರ್ವತಿ ಘನವೆಂಬೆನೆ? ಪರಮೇಶ್ವರನ ಅರ್ಧಾಂಗಿಯಾದಳು. ಅಂತಹ ಪರಮೇಶ್ವರನು ಘನವೆಂಬೆನೆ? ನಮ್ಮ ಕೂಡಲಸಂಗನ ಶರಣರ ಮನದ ಕೊನೆಯ ಮೊನೆಯ ಮೇಲಡಗಿದನು!