ಬಸವಣ್ಣ   
  ವಚನ - 919     
 
ತೆರಹಿಲ್ಲದ ನಡೆ, ತೆರಹಿಲ್ಲದ ನುಡಿ, ತೆರಹಿಲ್ಲದ ಸಂಭಾಷಣೆಯ ಸುಖವು, ತೆರಹಿಲ್ಲದ ನಂಬಿದ, ಸ್ವಾನುಭಾವ ಸುಖವು: ತೆರಹಿಲ್ಲದ ಮಹಿಮೆ, ತೆರಹಿಲ್ಲದ ವಿಚಾರ, ಕೂಡಲಸಂಗಮದೇವಾ, ನಿಮ್ಮ ಶರಣಂಗೆ !