ಬಸವಣ್ಣ   
  ವಚನ - 923     
 
ಬಯಲ ರೂಪ ಮಾಡಬಲ್ಲಾತನೆ ಶರಣನು; ಆ ರೂಪ ಬಯಲ ಮಾಡಬಲ್ಲಾತನೆ ಲಿಂಗಾನುಭಾವಿ. ಬಯಲ ರೂಪ ಮಾಡಲರಿಯದಿದ್ದರೆ ಎಂತು ಶರಣನಂಬೆ? ಆ ರೂಪ ಬಯಲ ಮಾಡಲರಿಯದಿದ್ದರೆ ಎಂತು ಲಿಂಗಾನುಭಾವಿಯೆಂಬೆ? ಈ ಉಭಯವೊಂದಾದರೆ ನಿಮ್ಮಲ್ಲಿ ತೆರಹುಂಟೆ, ಕೂಡಲಸಂಗಮದೇವಾ?