ಬಸವಣ್ಣ   
  ವಚನ - 930     
 
ಲಿಂಗವ ಪೂಜಿಸಿ ಫಲವೇನಯ್ಯಾ, ಸಮರತಿ ಸಮಕಳೆ ಸಮಸುಖವನರಿಯದನ್ನಕ್ಕ? ಲಿಂಗವ ಪೂಜಿಸಿ ಫಲವೇನಯ್ಯಾ, ಕೂಡಲಸಂಗಮದೇವರ ಪೂಜಿಸಿ ನದಿಯೊಳಗೆ ನದಿಯೆ ಬೆರಸಿದಂತಾಗದನ್ನಕ್ಕ?