ಬಸವಣ್ಣ   
  ವಚನ - 953     
 
ವೇದ ವೇಧಿಸಲರಿಯದೆ ಅಭೇದ್ಯಲಿಂಗವೆಂದುದು ನಡುನಡುಗಿತ್ತು. ಶಾಸ್ತ್ರ ಸಾಧಿಸಲರಿಯದೆ ಅಸಾಧ್ಯಲಿಂಗವೆಂದು ಸಾರುತೈದಾವೆ. ತರ್ಕ ತರ್ಕಿಸಲರಿಯದೆ ಅತರ್ಕ್ಯಲಿಂಗವೆಂದು ಮನಂಗೊಳ್ಳವು. ಆಗಮ ಅಗಮ್ಯಲಿಂಗವೆಂದು ಗಮಿಸಲರಿಯದೆ ಹೋದುವು. ನರರೂ ಸುರರೂ ಅಂತುವ ಕಾಣರು: ನಮ್ಮ ಕೂಡಲಸಂಗನ ಪ್ರಮಾಣ ಶರಣ ಬಲ್ಲ!