ಬಸವಣ್ಣ   
  ವಚನ - 964     
 
ಅಂಗದಲ್ಲಿ ಅರ್ಪಿತವಾದ ಸುಖವು ಲಿಂಗದಲ್ಲಿ ಲೀಯವಾಯಿತ್ತೆಂದಡೆ, ಅಂಗವ ಲಿಂಗದಲ್ಲಿ ಮತ್ತೆ ನಿಕ್ಷೇಪಿಸಿಹೆನೆಂಬ ಕಾರಣವೇಕಯ್ಯಾ ಶರಣಂಗೆ ? ಪ್ರಾಣನ ಲಿಂಗದಲ್ಲಿ ಸವೆಸಿ ನಿರವಯವಾಗಬಹುದಲ್ಲದೆ ಕರ್ಮದಿಂದಾದ ಕಾಯವ ಸವೆಸಿ ಸಯವಪ್ಪ ಪರಿ ಎಂತು ಹೇಳಯ್ಯಾ? ಕೂಡಲಸಂಗಮದೇವಾ, ನಿಮ್ಮ ಶರಣರು ಕಾಯವಿಡಿದಿರ್ದು ನಿರ್ಮಾಯವಾಗಿರ್ಪುದ ಹೇಳಯ್ಯಾ ನಿಮ್ಮ ಧರ್ಮ.