ಬಸವಣ್ಣ   
  ವಚನ - 971     
 
ಅಂತರಂಗದೊಳಗಿರ್ದ ನಿರವಯಲಿಂಗವನು ಸಾವಯವ ಲಿಂಗವ ಮಾಡಿ, ಶ್ರೀಗುರುಸ್ವಾಮಿ ಕರಸ್ಥಲಕ್ಕೆ ತಂದುಕೊಟ್ಟನಾಗಿ, ಆ ಇಷ್ಟಲಿಂಗವೆ ಅಂತರಂಗವನಾವರಿಸಿ ಅಂತರಂಗದ ಕರಣಂಗಳೆ ಕಿರಣಂಗಳಾಗಿ ಬೆಳಗುವ ಚಿದಂಶವೆ ಪ್ರಾಣಲಿಂಗವು, ಆ ಮೂಲ ಚೈತನ್ಯವೆ ಭಾವಲಿಂಗವು. ಇದನರಿದು, ನೋಡುವ ನೋಟ ಭಾವಪರಿಪೂರ್ಣವಾಗಿ ತಾನು ತಾನಾದಲ್ಲದೆ, ಇದಿರಿಟ್ತು ತೋರುವುದಿಲ್ಲವಾಗಿ ಅಖಂಡ ಪರಿಪೂರ್ಣವಪ್ಪ ನಿಜವು ತಾನೆ, ಕೂಡಲಸಂಗಮದೇವ.