ಬಸವಣ್ಣ   
  ವಚನ - 979     
 
ಅನುಭಾವವಿಲ್ಲದ ಭಕ್ತಿ ಅನುವಿಂಗೆ ಬಾರದು, ಅನುಭಾವವಿಲ್ಲದ ಲಿಂಗ ಸಮರಸಸುಖಕ್ಕೆ ನಿಲುಕದು, ಅನುಭಾವವಿಲ್ಲದ ಪ್ರಸಾದ ಪರಿಣಾಮವ ಕೂಡದು, ಅನುಭಾವವಿಲ್ಲದ ಏನನೂ ಅರಿಯಬಾರದು. ತನ್ನಲ್ಲಿ ತಾ ಸನ್ನಿಹಿತವುಳ್ಳಡೆ ಶಿವಶರಣರ ಸಂಗವೇತಕ್ಕೆನಲುಂಟೆ? ಕೂಡಲಸಂಗಮದೇವಯ್ಯಾ, ನಿಮ್ಮ ಅನುಭಾವ ಮಾತಿನ ಮಥನವೆಂದು ನುಡಿಯಬಹುದೆ ಪ್ರಭುವೆ?