ಬಸವಣ್ಣ   
  ವಚನ - 988     
 
ಅಯ್ಯಾ, ಕೊಟ್ಟ ಲಿಂಗವ ಮರಳಿ ಕೊಂಡು ಬಾ ಎಂದು ಎನ್ನನಟ್ಟಿದನಯ್ಯಾ ಶಶಿಧರನು ಮರ್ತ್ಯಕ್ಕೆ. ನಿಮ್ಮ ಮುಖದಿಂದ ಎನ್ನ ಭವ ಹರಿವುದೆಂದು ಹರಹಿಕೊಂಡಿದ್ದೆನಯ್ಯಾ ದಾಸೋಹವನು. ನಿಮ್ಮ ಬರವ ಹಾರಿ ಸವೆದವು ಒಂದನಂತ ದಿನಗಳು, ಇಂದೆನ್ನ ಪುಣ್ಯದ ಫಲದಿಂದ ಎನಗೆ ಗೋಚರವಾದಿರಿ, ಹಿಂದಣ ಸಂದೇಹ ಸೂತಕ ಹಿಂಗಿತ್ತು. ಎನ್ನ ಪ್ರಾಣಲಿಂಗವು ನೀವೇ ಆಗಿ, ಎನ್ನ ಸರ್ವಾಂಗಲಿಂಗದಲ್ಲಿ ಸನ್ನಿಹಿತವಾಗಿ, ಎನ್ನ ಚಿಂತೆಯ ನಿಶ್ಚಿಂತೆಯ ಮಾಡಾ ಕೂಡಲಸಂಗಮದೇವ ಪ್ರಭುವೆ.