ಬಸವಣ್ಣ   
  ವಚನ - 994     
 
ಅಯ್ಯಾ, ನಿಮ್ಮ ಶರಣರ ನಿಲವ ಸ್ವರ್ಗ ಮರ್ತ್ಯ ಪಾತಾಳದೊಳಗೆ ಬಲ್ಲವರಿಲ್ಲವಯ್ಯಾ, ಅಘಟಿತ ಘಟಿತರು, ಅಖಂಡಿತ ಮಹಿಮರು, ನಿಜದಲ್ಲಿ ನಿರ್ಲೇಪ ಭಾವಕರು. ಕೂಡಲಸಂಗಮದೇವಾ, ನಿಮ್ಮ ಶರಣರ ನಿಲವನರಿವಡೆ ನಾನೇತರವನಯ್ಯಾ.