ಬಸವಣ್ಣ   
  ವಚನ - 1010     
 
ಅರಿದರಿದು ಎನಗಿಂದು ಕಣ್ಗೆ ಮಂಗಳವಾಯಿತ್ತು, ಒಂದಹುದು ಒಂದಾಗದೆಂಬ ಭ್ರಮೆಯವನಲ್ಲ, ಬೇಕು ಬೇಡೆಂಬ ಜಂಜಡದವನಲ್ಲ, ಎಡೆವರಿಯದ ನೋಟ, ನುಡಿಯ ಸಡಗರವರತು ಎಡೆಯಾಟ ಕೋಟಲೆಯ ಕಳೆಯ ಬಂದನು, ನೋಡುವರ ಮನದ ಸುಖದ ಸಾಗರನಿಧಿಯನೇನೆಂದುಪಮಿಸುವೆನು. ಎನ್ನ ಉಭಯಕರ್ಮವ ಕಳೆದು ತನ್ನೊಳಗೆ ಇಂಬಿಟ್ಟುಕೊಳಬಂದನು, ಕೂಡಲಸಂಗಮದೇವ, ಕೃಪಾಮೂರ್ತಿ.