ಬಸವಣ್ಣ   
  ವಚನ - 1011     
 
ಅರಿದಿಹೆನೆಂದಡೆ ಅರಿವಿಂಗಸಾಧ್ಯ, ನೆನೆದಿಹೆನೆಂದಡೆ ನೆನಹಿಂಗಸಾಧ್ಯ, ಭಾವಿಸಿಹೆನೆಂದಡೆ ಭಾವಕ್ಕಸಾಧ್ಯ, ವಾಙ್ಮನಕ್ಕಗೋಚರ ಲಿಂಗವನರಿವ ಪರಿಯೆಂತಯ್ಯಾ, ಗುರು ತೋರದನ್ನಕ್ಕರ? ಗುರುಶಿಷ್ಯರ ಮಥನದಲ್ಲಿ ಸ್ವಯಂಜ್ಯೋತಿಲಿಂಗವು ಉದಯವಪ್ಪುದೆಂಬ ಶ್ರುತಿ ಹುಸಿಯೆ? ಕೂಡಲಸಂಗಮದೇವಾ, ನಿಮ್ಮ ಮಹಾನುಭಾವರ ಮಥನದಿಂದ ಎನ್ನಲ್ಲಿ ನಿಜವ ನೆಲೆಗೊಳಿಸಾ, ಪ್ರಭುವೆ.