ಬಸವಣ್ಣ   
  ವಚನ - 1031     
 
ಅಳವಡಿಸಿದ ಪದಾರ್ಥ ಅರ್ಪಿತಕ್ಕೆ ಸರಿಯಾಯಿತ್ತು, ಅಳವಡಿಸದ ಮುನ್ನವೆ ಕೈಕೊಳ್ಳುತ್ತೈದಾನೆ ಶಿವನು, ಸಂದ ಪದಾರ್ಥ ಸಲ್ಲಲಿ. ಕೂಡಲಸಂಗಮದೇವರ ಆರೋಗಣೆಯ ಅವಸರಕ್ಕೆ ಸಂಚಿತ ಸಯದಾನವ ತೆಗೆಸಿರೆ, ಸೊಡ್ಡಳ ಬಾಚರಸರೆ.