ಬಸವಣ್ಣ   
  ವಚನ - 1044     
 
ಆದಿಯ ಲಿಂಗವ ತಂದಾತನಲ್ಲಯ್ಯನು. ಅನಾದಿಯ ಲಿಂಗವ ತಂದಾತನಲ್ಲಯ್ಯನು. ಭಾಪುರೆ ಜಂಗಮವೆ, ನಿರ್ವಯಲಯನವಗ್ರಹಿಸಿದಿರಿ, ನಿಮಗೋಸುಗ ಮಾಡುವ ಸಯದಾನವನು ನಡೆಗೆಟ್ಟು ಮಾಡುವೆನು, ನುಡಿಗೆಟ್ಟು ಮಾಡುವೆನು, ಸರ್ವಕುಳಕ್ಕೆ ನೀನೆಂದು ಅಲ್ಲಯ್ಯನ ಪ್ರಸಾದಕ್ಕೆ ಕೈಯಾನುವೆನು. ನವಬ್ರಹ್ಮರ ಕೇರಿಯೊಳಗೆ ಅಲ್ಲಯ್ಯನ ಪ್ರಭೆ, ರುದ್ರಭೂಮಿಯೊಳಗೆ ಅಲ್ಲಯ್ಯನ ಪ್ರಭೆ, ಬಂದು ನಿಂದ ನಿಲವಿಂಗೆ ಅಲ್ಲಯ್ಯನ ಪ್ರಭೆ. ಸಯದಾನವಿಲ್ಲದಡೆ ಎನ್ನ ನೀಡುವೆನು ಕೂಡಲಸಂಗಮದೇವಯ್ಯಾ.