ಬಸವಣ್ಣ   
  ವಚನ - 1045     
 
ಆದಿಯಲ್ಲಿ ಸಾಧ್ಯವೆಂಬೆನೆ ಅಲ್ಲಿಂದತ್ತತ್ತ, ಅನಾದಿಯಲ್ಲಿ ಸಾಧ್ಯವೆಂಬೆನೆ ಅಲ್ಲಿಂದತ್ತತ್ತ, ಸಾಧ್ಯಾಸಾಧ್ಯವೆಂಬ ಸೂತಕ ಶಬ್ದಕ್ಕತೀತ. ಆ ಲಿಂಗವೆ ಆಲಿಂಗನವಾಗಿ ಅವಿರಳ ಸಂಪನ್ನನಾದಲ್ಲಿ, ಭೇದಭಾವವುಂಟೆಂಬೆನೆ? ಅದೆ ಭವಕ್ಕೆ ಬೀಜ. ಎನ್ನ ಪ್ರಾಣಲಿಂಗ ನೀವೆಂದೆ ಇಪ್ಪೆನಯ್ಯಾ ಕೂಡಲಸಂಗಮದೇವಾ.