ಬಸವಣ್ಣ   
  ವಚನ - 1048     
 
ಆನು, ನಿಮ್ಮ ಬಂಟರ ಬಂಟ ನಾನಯ್ಯಾ, ಆನು, ನಿಮ್ಮ ಲೆಂಕರ ಲೆಂಕ ನಾನಯ್ಯಾ, ಆನು, ನಿಮ್ಮ ತೊತ್ತಿರ ಪಡುಗವ ತೆಗೆವ ಪಡಿದೊತ್ತಯ್ಯಾ. ಕೂಡಲಸಂಗನ ಶರಣರಿಗೆಲ್ಲಾ ಸಂಗನಬಸವನ ಬಿನ್ನಪ: ಕವಳಿಗೆಗೆ ಸಂದಿತ್ತು; ನಿಮ್ಮ ನಿಜಪದದಲ್ಲಿ ಬೆರಸೆಂದು ಕೃಪೆಮಾಡಿರಯ್ಯಾ.