ಬಸವಣ್ಣ   
  ವಚನ - 1049     
 
ಆನು ನಿಮ್ಮಲ್ಲಿ ಪ್ರಪಂಚಿನುಪಚಾರವನರಿಯೆನಯ್ಯಾ. ನಿಮ್ಮ ಪಾದದಲ್ಲಿ ತದ್ಗತನಾಗಿಪ್ಪೆ, ಭಕ್ತಿ ಯುಕ್ತಿ ವಿರಕ್ತಿಯ ಉಪಚಾರವನರಿಯೆನು. ಕೂಡಲಸಂಗಮದೇವಾ, ಭಿನ್ನವಿಲ್ಲದ ಭೃತ್ಯಾಚಾರಕ್ಕೆ ಬಂದ ಪದಾರ್ಥವ ನೀನೆಂದೆ ಚಿತ್ತೈಸಯ್ಯಾ.