ಬಸವಣ್ಣ   
  ವಚನ - 1060     
 
ಇನ್ನೇವೆನಿನ್ನೇವೆ ಕೆಮ್ಮನೆ ಕೆಟ್ಟೆನು, ಇನ್ನೇವೆನಿನ್ನೇವೆ ಕೆಮ್ಮನೆ ಕೆಟ್ಟೆನು. ನಿಮ್ಮ ಶರಣರು ಬಂದು ಬಾಗಿಲೊಳಿರಲು, ದಿಮ್ಮನೆ ಇದಿರೆದ್ದು ವಂದಿಸಲರಿಯದೆ ಕೆಟ್ಟ ಕೇಡನೇನೆಂದುಪಮಿಸುವೆನು. ಕೂಡಲಸಂಗಮದೇವಾ, ನಾನುಭಯಭ್ರಷ್ಟನೆಂಬುದು ಎನಗಿಂದರಿಯಬಂದಿತ್ತು.