ಬಸವಣ್ಣ   
  ವಚನ - 1062     
 
ಇಷ್ಟಲಿಂಗಕ್ಕರ್ಪಿಸಿ, ಮೃಷ್ಟಾನ್ನವನುಂಡು, ಇಷ್ಟಾರ್ಥಸಿದ್ಧಿಯ ಪಡೆದೆಹೆವೆಂಬ ಮರಳುಗಳು ನೀವು ಕೇಳಿರೆ; ಪ್ರಾಣಲಿಂಗಸ್ಥಲ ನಿಮಗೆಲ್ಲಿಯದು? ಪ್ರಸಾದಸ್ಥಲ ನಿಮಗೆಲ್ಲಿಯದು? ಓಗರವನುಂಡು ಆಗಾದೆವೆಂದಡೆ, ಮೂಗಕೊಯ್ಯದೆ ಮಾಣ್ಬನೆ ನಮ್ಮ ಕೂಡಲಸಂಗಮದೇವನು?