ಬಸವಣ್ಣ   
  ವಚನ - 1066     
 
ಈರೇಳು ರತ್ನ, ಹದಿನೆಂಟು ಲಕ್ಷಗಜ, ನಾರಿಯರು ನಾಲ್ಕು ಲಕ್ಷವು ಮೂವತ್ತೆರಡುಸಾವಿರ, ಮಕ್ಕಳು ಹದಿನಾರು ಲಕ್ಷ, ಅವರುಗಳೇರುವ ರಥಂಗಳು ಸೂರ್ಯನ ರಥಕ್ಕೆ ಸರಿಮಿಗಿಲೆನಿಸುವ ರಥಂಗಳು, ಸಾಲದೆ? ಸಿರಿಗೆ ನೆಲೆಯೆನಿಸುವ ಅಸಂಖ್ಯಾತ ಪುರ, ಮೂರುವರೆ ಕೋಟಿ ಬಂಧುಗಳು, ಮೂವತ್ತೆಂಟು ಕೋಟಿ ಜಾತ್ಯಶ್ವ, ಇಪ್ಪತ್ತೆಂಟು ಕೋಟಿ ಮೈಗಾವಲ ವೀರಭಟರು, ಛಪ್ಪನ್ನ ದೇಶದ ರಾಯರುಗಳೆಲ್ಲರು ಕಪ್ಪಕಾಣಿಕೆಯಂ ತೆತ್ತು ಬಹರು. ಕೂಡಲಸಂಗಮದೇವಾ, ನಿಮ್ಮ ಕೃಪೆ ತಪ್ಪಿದಲ್ಲಿ ಆ ಸಗರ ಕಾರ್ತವೀರ್ಯರೊಂದು ಕ್ಷಣದಲ್ಲಿ ಮಡಿದರು.