ಬಸವಣ್ಣ   
  ವಚನ - 1075     
 
ಎನಗೆ ಜನನವಾಯಿತ್ತೆಂಬರು ಎನಗೆ ಜನನವಿಲ್ಲವಯ್ಯಾ, ಎನಗೆ ಮರಣವಾಯಿತ್ತೆಂಬರು ಎನಗೆ ಮರಣವಿಲ್ಲವಯ್ಯಾ. ಜನನವಾದಡೆ ನಿಮ್ಮ ಪಾದೋದಕ ಪ್ರಸಾದವ ಕೊಂಬೆ, ಮರಣವಾದಡೆ ನಿಮ್ಮ ಶ್ರೀಚರಣವನೆಯ್ದುವೆ. ಬಾವನ್ನದ ವೃಕ್ಷವು ಊರೊಳಗಿದ್ದಡೇನು, ಅಡವಿಯೊಳಗಿದ್ದಡೇನು ಪರಿಮಳ ಒಂದೇ, ಕೂಡಲಸಂಗಮದೇವಾ.