ಬಸವಣ್ಣ   
  ವಚನ - 1076     
 
ಎನಗೆ ನಾನೇ ಹಗೆ ನೋಡಯ್ಯಾ, ಎನಗೆ ನಾನೇ ಕೆಳೆ ನೋಡಯ್ಯಾ. ನಿಮ್ಮ ಸದ್ಭಕ್ತರೊಡನೆ ವಿರೋಧಮಾಡಿದಡೆ ಎನ್ನ ಕೊಲುವುದಾಗಿ, ನಿಮ್ಮ ಪುರಾತನರಿಗಂಜಿ ಬೆಸಗೊಂಡಡೆ ಎನ್ನ ಕಾಯ್ವುದಾಗಿ. ಅನ್ಯ ಹಗೆಯೆಲ್ಲಿ? ಕೆಳೆಯೆಲ್ಲಿ? ಬಾಗಿದ ತಲೆಯ ಮುಗಿದ ಕೈಯಾಗಿರಿಸು ಕೂಡಲಸಂಗಮದೇವಾ.