ಬಸವಣ್ಣ   
  ವಚನ - 1080     
 
ಎನ್ನ ಕರಸ್ಥಲದ ಲಿಂಗವ ಅನಿಮಿಷ ಕೊಂಡನು, ಅನಿಮಿಷನ ಕರಸ್ಥಲದ ಲಿಂಗವ ನೀವು ಕೊಂಡಿರಿ. ನಿಮ್ಮ ಕರಸ್ಥಲವೆ ಪರಸ್ಥಲವಾಯಿತ್ತು, ಕರುಹಳಿದಲ್ಲಿ ಕುರುಹ ಕೊಂಬ ಪರಿ ಎಂತಯ್ಯಾ? ಕೊಡುವವರು ಕೊಂಬವರೊಳಗೆ ಸಿಲುಕಿದ ಬಳಿಕ ಕೊಂಬವರು ಕೊಡುವವರೊಳಗೆ ಸಿಲುಕಿದ ಬಳಿಕ, ಕೂಡಲಸಂಗಮದೇವಪ್ರಭುವೆ, ನಿಮ್ಮ ಕರಸ್ಥಲದ ಲಿಂಗವೆನಗೆ ಸಾಧ್ಯವಹ ಪರಿಯೆಂತಯ್ಯಾ?