ಬಸವಣ್ಣ   
  ವಚನ - 1082     
 
ಎನ್ನ ಕಾಯದ ಕತ್ತಲೆಯ ಕಳೆಯಲರಿಯೆನು, ಎನ್ನ ಜೀವದ ನಿಲವ ಗೆಲಲರಿಯೆನು, ಎನ್ನ ಭಾವದ ಸೂತಕವ ಕಳೆಯಲರಿಯೆನು. ನಾನೆಂತು ಬಲ್ಲೆನಯ್ಯಾ ನಿಮ್ಮ ಘನಮಹಿಮರ ನಿಲವ? ಕೂಡಲಸಂಗಮದೇವಾ, ನಿಮ್ಮ ಶರಣ ಮಡಿವಾಳ ಮಾಚಿತಂದೆಯ ಘನವ ನೀವೆ ಬಲ್ಲಿರಿ.