ಬಸವಣ್ಣ   
  ವಚನ - 1084     
 
ಎನ್ನ ಕಾಯದ ಕರಸ್ಥಲದಲ್ಲಿ ಅಲ್ಲಮಪ್ರಭುದೇವರ ಕಂಡೆನು, ಎನ್ನ ಪ್ರಾಣದ ಕರಸ್ಥಲದಲ್ಲಿ ಚೆನ್ನಬಸವಣ್ಣನ ಕಂಡೆನು, ಎನ್ನ ಸರ್ವಾಂಗದ ಕರಸ್ಥಲದಲ್ಲಿ ಮಡಿವಾಳಯ್ಯನ ಕಂಡೆನು. ಒಳಗು ಹೊರಗು, ಹೊರಗು ಒಳಗೆಂಬ ಭೇದವನರಿಯದೆ ಇದ್ದೆನು. ಕೂಡಲಸಂಗಮದೇವಯ್ಯಾ, ನಿಮ್ಮ ಶರಣರು ಎನ್ನ ಪಾವನವ ಮಾಡಿದ ಪರಿಣಾಮವ ಅಂತಿಂತೆನಲಮ್ಮದೆ ನಮೋ ನಮೋ ಎನುತ್ತಿದ್ದೆನು.