ಬಸವಣ್ಣ   
  ವಚನ - 1087     
 
ಎನ್ನ ಗುರು ಪರಮಗುರು ನೀವೆ ಕಂಡಯ್ಯ, ಎನ್ನ ಗತಿಮತಿ ನೀವೆ ಕಂಡಯ್ಯ, ಎನ್ನ ಅರಿವಿನ ಜ್ಯೋತಿ ನೀವೆ ಕಂಡಯ್ಯ, ಎನ್ನಂತರಂಗ ಬಹಿರಂಗದ ಮಹವು ನೀವೆ ಕಂಡಯ್ಯ. ಕೂಡಲಸಂಗಮದೇವಾ, ನೀವೆನಗೆ ಗುರು, ನಾ ನಿಮಗೆ ಶಿಷ್ಯನೆಂಬುದನು ನಿಮ್ಮ ಶರಣ ಸಿದ್ಧರಾಮಯ್ಯದೇವರೆ ಬಲ್ಲರು.