ಬಸವಣ್ಣ   
  ವಚನ - 1097     
 
ಎನ್ನ ಮನವೆಂಬ ಮರ್ಕಟನು ತನುವಿಕಾರವೆಂಬ ಅಲ್ಪಸುಖದಾಸೆಗಾಡಿ, ವೃಥಾ ಭ್ರಮೆಗೊಂಡು, ನಾನಾ ದೆಸೆಗೆ ಲಂಘಿಸಿ ಅಳಲಿಸಿ ಬಳಲಿಸುತ್ತಿದೆ ನೋಡಾ ! ಕೂಡಲಸಂಗಮದೇವರೆಂಬ ಕಲ್ಪವೃಕ್ಷಕ್ಕೆ ಲಂಘಿಸಿ ಅಪರಿಮಿತದ ಸುಖವನೈದದು, ನೋಡಾ.