ಬಸವಣ್ಣ   
  ವಚನ - 1113     
 
ಒಡೆದ ಹಂಚು ಮರಳಿ ಮಡಕೆಯಾಗಬಲ್ಲುದೆ? ಕೆಟ್ಟ ವೃತಗೇಡಿ ಭಕ್ತನಾಗಬಲ್ಲನೆ? ಬಾಳೆಗೆ ಫಲವೆ ಕಡೆ, ಚೇಳಿಗೆ ಗರ್ಭವೆ ಕಡೆ. ಕೂಳು ಮಾರೆಡೆಯುಂಟು, ಸೀರೆ ಮಾರೆಡೆಯುಂಟು, ಭಕ್ತಿ ಮಾರೆಡೆಯುಂಟೆ, ಕೂಡಲಸಂಗಮದೇವಾ?