ಬಸವಣ್ಣ   
  ವಚನ - 1114     
 
ಒಡೆಯರುಳ್ಳಾಳಿಂಗೆ ಕೇಡಿಲ್ಲ ಕಾಣಿರೊ ! ಊರೆನ್ನದೆ ಅಡವಿಯೆನ್ನದೆ, ಆಳನರಸಿ ಬಹಬ(ಆಳ್ದ) ರುಂಟೆ ? ಜೋಳವಾಳಿಂಗೆ ಬಿಜ್ಜಳಂಗೆ ಆಳಾದಡೇನು? ವೇಳೆವಾಳಿಂಗೆ ಕೂಡಿಕೊಂಡಿಪ್ಪ ಕೂಡಲಸಂಗಮದೇವ.