ಬಸವಣ್ಣ   
  ವಚನ - 1141     
 
ಕಾಮ್ಯ ಕಲ್ಪಿತಂಗಳಿಲ್ಲದೆ, ನಿಮ್ಮಿಂದ ನೀವೆ ಸ್ವಯಂಭುವಾಗಿದ್ದಿರ(ಲ್ಲಾ), ನಿಮ್ಮ ಪರಮಾನಂದದ ಪ್ರಭಾಪರಿಣಾಮದಲ್ಲಿ ಒಂದನಂತಕಾಲವಿದ್ದಿರಲ್ಲಾ, ನಿಮ್ಮಾದ್ಯಂತವ ನೀವೆ ಅರಿವುತಿದ್ದಿರಲ್ಲಾ, ನಿಮ್ಮ ಸ್ವಭಾವದುದಯವ ನೀವೆ ಬಲ್ಲಿರಿ, ಕೂಡಲಸಂಗಮದೇವಾ.