ಬಸವಣ್ಣ   
  ವಚನ - 1143     
 
ಕಾಯದ ಕಳವಳದಲ್ಲಿ ಹುಟ್ಟಿ ಲಿಂಗವನರಿಯದಂ (ತವರಿ) ರಲಿ, ಷಡು ಮಹಾವೇದ ಶಾಸ್ತ್ರಗಮಪುರಾಣದರ್ಥವನೋದಿ ಲಿಂಗ ಉಂಟು, ಇಲ್ಲೆಂಬ ಅಜ್ಞಾನಿಗಳಂತಿರಲಿ. ಷಡುಶೈವರು ಹಂಚಾಗಿ ಹೋದರು. ಎಂತು ನಿಜಲಿಂಗವಂತಂಗೆ ಸರಿಯೆಂಬೆ? ಅದ್ವೈತಿಗಳೆಲ್ಲಾ ಲಿಂಗಾರಾಧನೆ ಹುಸಿಯೆಂದು ಬುದ್ಧಿತಪ್ಪಿ ಕ್ರಮಗೆಟ್ಟು ಹೋದರು, ಬ್ರಹ್ಮ ನಾನೆಂದು ಶಿರವ ಹೋಗಾಡಿಕೊಂಡನು, ಬ್ರಹ್ಮಾದಿದೇವತೆಗಳು ಮಹಾಲಿಂಗಕ್ಕೆ ದೂರವಾಗಿ ಹೋದರು. ಹಮ್ಮಿಲ್ಲದ ಕಾರಣ ಕೂಡಲಸಂಗನ ಶರಣರು ಜಂಗವಂದ್ಯರಾದರು.