ಬಸವಣ್ಣ   
  ವಚನ - 1149     
 
ಕಾಲಲ್ಲಿ ಕಟ್ಟಿದ ಗುಂಡು, ಕೊರಳಲಿ ಕಟ್ಟಿದ ಬೆಂಡು, ತೇಲಲೀಯದು ಗುಂಡು, ಮುಳುಗಲೀಯದು ಬೆಂಡು, ಇಂತಪ್ಪ ಸಂಸಾರಶರಧಿಯ ದಾಂಟಿಸಿ ಕಾಲಾಂತಕನೆ ಕಾಯೋ, ಕೂಡಲಸಂಗಯ್ಯಾ.