ಬಸವಣ್ಣ   
  ವಚನ - 1151     
 
ಕೀಟಕ ಸೂತ್ರದ ನೂಲಗೂಡಮಾಡಿ ಸುತ್ತಿರ್ಪಂತೆ ಸೂತ್ರಕ್ಕೆ ನೂಲನೆಲ್ಲಿಂದ ತಂದಿತ್ತಯ್ಯಾ? ರಾಟಿಯಿಲ್ಲ, ಅದಕ್ಕೆ ಹಂಜಿ ಮುನ್ನವೆ ಇಲ್ಲ, ನೂತವರಾರೋ! ತನ್ನೊಡಲ ನೂಲ ತೆಗೆದು ಪಸರಿಸಿ, ಅದರೊಳು ಪ್ರೀತಿಯಿಂದೊಲಿದಾಡಿ, ತುದಿಯಲ್ಲಿ ತನ್ನೊಳಗದ ಮಡಗಿಕೊಂಡಿಪ್ಪಂತೆ, ತನ್ನಿಂದಾದ ಜಗವ ತನ್ನೊಳಗೈದಿಸಿಕೊಳಬಲ್ಲ ನಮ್ಮ ಕೂಡಲಸಂಗಮದೇವರು.