ಬಸವಣ್ಣ   
  ವಚನ - 1156     
 
ಕೆದರಿದ ತಲೆಯ, ತೊನೆವ ನಡೆಯ, ಹಣೆಯ ಬುಗುಟಿನ, ಕರಸ್ಥಲದ ಅನಿಮಿಷದಿಂದ ಬಹಿರಂಗದ (ವಧಾ)ನ ತಪ್ಪಿ, ಇದಿರುಗೊಯಿಲು ತಾಗಿ ಪುರ್ಬೊಡೆದು, ಕಣ್ಣು ತರಿದು, ಕಿವಿ ಹರಿದು, ಜೋಲುವ ರಕ್ತಧಾರೆಯ, ಗಾಳಿಯ ಧೂಳಿಯ ಮಳೆಯ ಜೋರಿನ, ಬೆನ್ನ ಬಾಸುಳದ, ಎಡಬಲದ ಬರಿಯ ತದ್ದಿನ, ಮುಳ್ಳುದರಹಿನ, ಕಂಕುಳ ಸೀಳ ಕಂಡು ನೋಡುವ ಜನರು ಬೆರಗಾಗೆ- ಪೊರವಾರಿನ ಮರೆಯ ದಿಗಂಬರದ ಬಣಗು ಸುರಿವುತ್ತ, ಆಪ್ಯಾಯನವರತು, ಬಿದ್ದು ಮೊಳಕಾಲೊಡೆದು, ಹೊಸ ಹುಣ್ಣಿನ ರಕ್ತದ ಜೋರು ಹರಿದು, ಮುಂಗಾಲ ಕಣೆ (ಒ) ಳೆದು, ಕಣಕಾಲ ಸಂದು ತಪ್ಪಿ, ಕಿರುಬೆರಳು ಎಡಹಿ, ಹೆಬ್ಬೊಟ್ಟೆಡೆದ ಗಾಯದ, ಉರುಗು ಟೊಂಕದ, ಪೆರಚು ಗುಂಟನ ನೋಡಾ ಚೆನ್ನಬಸವಣ್ಣಾ. ಅತ್ಯಂತ ಮಲಿನ ಕೂಡಲಸಂಗಮದೇವರ ಕುರುಹು ವಿಪರೀತ, ನೋಡುವಡೆ ಭಯಂಕರವಾಗಿದೆ ನೋಡಯ್ಯಾ.