ಬಸವಣ್ಣ   
  ವಚನ - 1157     
 
ಕೃಷಿ ಕೃತ್ಯ ಕಾಯಕದಿಂದಾದೊಡೇನು? ತನುಮನಬಳಲಿಸಿ ತಂದು ದಾಸೋಹವ ಮಾಡುವ ಪರಮಸದ್ಭಕ್ತನ ಪಾದವ ತೋರಯ್ಯ ಎನಗೆ. ಅದೆಂತನೆ, ಆತನ ತನು ಶುದ್ಧ, ಆತನ ಮನ ಶುದ್ಧ. ಆತನ ನಡೆ ಶುದ್ಧ, ನುಡಿಯೆಲ್ಲ ಪಾವನವು. ಆತಂಗೆ ಉಪದೇಶವ ಮಾಡಿದಾತನೆ ಪರಮಸದ್ಗುರು. ಅಂತಪ್ಪ ಸದ್ಭಕ್ತನ ಮನೆಯ ಕೈಲಾಸವೆಂದು ಹೊಕ್ಕು ಲಿಂಗಾರ್ಚನೆಯ ಮಾಡುವ ಜಂಗಮವೇ ಜಗತ್ಪಾವನ. ಇಂತಪ್ಪವರ ನಾನು ನೆರೆ ನಂಬಿ, ನಮೋ ನಮೋ ಎಂಬೆನಯ್ಯಾ ಕೂಡಲಸಂಗಮದೇವಾ.

C-410 

  Wed 13 Dec 2023  

 ರೈತ ಕುಟುಂಬ
  Akash
Karnataka