ಬಸವಣ್ಣ   
  ವಚನ - 1161     
 
ಕೈಯಲ್ಲಿ ಮುಟ್ಟಿದ ಪದಾರ್ಥ ಕೈಯೊಳಗೆ ಐಕ್ಯ, ಕಂಗಳು ತಾಗಿದ ಪದಾರ್ಥ ಕಂಗಳೊಳೈಕ್ಯ, ನಾಲಗೆ ತಾಗಿದ ಪದಾರ್ಥ ನಾಲಗೆಯೊಳಗೈಕ್ಯ. ನೀಡುವ ಪರಿಚಾರಕರು ಬೇಸತ್ತರಲ್ಲದೆ ಆರೋಗಣೆಯ ಮಾಡುವ ದೇವನೆತ್ತಲೆಂದರಿಯನು. ಬ್ರಹ್ಮಾಂಡವನೊಡಲೊಳಗಡಗಿಸಿಕೊಂಡು ಬಂದ ದೇವಂಗೆ ಆರೋಗಣೆಯ ಮಾಡಿಸಿಹೆನೆಂಬ ಅಹಂಕಾರದಲ್ಲಿ ಇದ್ದೆನಾಗಿ, ನಾನು ಕೆಟ್ಟ ಕೇಡನೇನೆಂಬೆನಯ್ಯಾ? ಕೂಡಲಸಂಗಮದೇವರ ತೃಪ್ತಿಯ ತೆರನ ಬಲ್ಲಡೆ ಹೇಳಾ ಮಡಿವಾಳ ಮಾಚಯ್ಯ.