ಬಸವಣ್ಣ   
  ವಚನ - 1171     
 
ಗುರುಕಾರುಣ್ಯವಿಡಿದು ಬಂದ ತನ್ನ ಕರಸ್ಥಲದ ಇಷ್ಟಲಿಂಗದಲ್ಲಿ ದೃಷ್ಟಿನಟ್ಟು, ಭಾವಸಂಪನ್ನನಾಗಿ ನಿಂದು, ನಿಜವನೈದಲರಿಯದೆ ಪವನಮುಖದಿಂದ ಲಿಂಗವನರಿದೆನೆಂಬುದೆ ದ್ರೋಹ. ಇಡಾ ಪಿಂಗಳ ಸುಷುಮ್ನಾನಾಳವ ಬಲಿದು ಲಿಂಗವ ಕಂಡೆಹೆನೆಂಬ ಕ್ರೂರಕರ್ಮಿಗಳನು ಕೂಡಲಸಂಗಯ್ಯ ಕೆಡಹಿ ಮೂಗಕೊಯ್ವ ಕಾಣಿರೊ.