ಬಸವಣ್ಣ   
  ವಚನ - 1176     
 
ಗುರುಲಿಂಗಜಂಗಮವ ನಂಬಿ ಕರೆದಡೆ, ಓ ಎಂಬ ಶಿವನು. ನಂಬದೆ ಕರೆದಡೆ ಓ ಎಂಬನೇ ಶಿವನು ? ನಂಬಲರಿಯರು, ನಚ್ಚಲರಿಯರು ಡಂಭಿನ ಭಕ್ತರು. ನಂಬದೆ ನಚ್ಚದೆ ಬರಿದೆ ಕರೆದಡೆ ಶಂಭು ಮೌನದಲ್ಲಿಪ್ಪ ನಮ್ಮ ಕೂಡಲಸಂಗಮದೇವರು.