ಬಸವಣ್ಣ   
  ವಚನ - 1190     
 
ಜಂಗಮಕ್ಕೆ ಮಾಡಿ ಗತಿಯ ಪಡೆದೆಹೆನೆಂಬ ಬೆವಹಾರದ ಭಕ್ತರು ನೀವು ಕೇಳಿರಯ್ಯಾ. ಜಂಗಮಕ್ಕೆ ಮಾಡಿ, ಗತಿಯ ಪಡೆದೆಹೆನೆಂಬ, ಭಕ್ತಿವ್ಯರ್ಥರು ನೀವು ಕೇಳಿರಯ್ಯಾ. ಅಗ್ನಿಮುಖದಲ್ಲಿ ಪಾಕವಾದ ಸಸಿ ತೆನೆಯಪ್ಪುದೆ? ಶಶಿಧರಂಗೆ ಮಾಡಿದಡೆ ಫಲವಪ್ಪುದು, ಆ ಫಲದಾಯಕನೆ ಮರಳಿ ಭವಕ್ಕೆ ಬಹನು. ಜಂಗಮಕ್ಕೆ ಮಾಡಿದಡೆ ಫಲವಿಲ್ಲ, ಮರಳಿ ಭವವಿಲ್ಲ. ಕಿಚ್ಚಿನ ಕಣಜದಲ್ಲಿ ಬೀಜವ ತುಂಬಿ ಬಿತ್ತುವ ದಿನಕ್ಕರೆಸಿದಡುಂಟೆ ? ಕೂಡಲಸಂಗಮದೇವಾ.