ಬಸವಣ್ಣ   
  ವಚನ - 1193     
 
ಜಂಗಮವೆ ಲಿಂಗವೆಂಬ ಭಾವ ಫಲಿಸಿದಡೆ ಇಂದಿನ ಪುಣ್ಯಕ್ಕೆ ಸರಿಯುಂಟೆ? ಲಿಂಗದ ಒಡಲ ಮನೆಮಾಡಿಪ್ಪ ಜಂಗಮವೆನ್ನ ಕಣ್ಣಮುಂದೆ ಸುಳಿದಡೆ ಇಂದೆನ್ನ ಭಾಗ್ಯಕ್ಕೆ ಕಡೆಯಿಲ್ಲ. ಆ ಜಂಗಮವೆ ದಿಟಕ್ಕೆನ್ನ ಮನೆಗೆ ಬಂದಡೆ ಸಲುಗೆಯ ವರವ ಹಡೆವೆನು ಕಾಣಾ, ಕೂಡಲಸಂಗಮದೇವರಲ್ಲಿ ಚೆನ್ನಬಸವಣ್ಣಾ, ನೀನಹುದೆನಲಿಕೆ.