ಬಸವಣ್ಣ   
  ವಚನ - 1202     
 
ತನುವ ಕೊಟ್ಟೆನೆಂದು ನುಡಿದು, ಗುರುವಚನಕ್ಕೆ ದೂರವಾದೆ, ಮನವ ಕೊಟ್ಟೆನೆಂದು ನುಡಿದು, ಲಿಂಗಮುಖಕ್ಕೆ ದೂರವಾದೆ, ಧನವ ಕೊಟ್ಟೆನೆಂದು ನುಡಿದು, ಜಂಗಮಮುಖಕ್ಕೆ ದೂರವಾದೆ. ಕೂಡಲಸಂಗಮದೇವಯ್ಯಾ, ನಿಮಗೆ ಮಾಡಿದೆನೆಂದು ನುಡಿದು ಕೆಟ್ಟ ಕೇಡಿಂಗೆ ಕಡೆಯಿಲ್ಲ.