ಬಸವಣ್ಣ   
  ವಚನ - 1221     
 
ದೇವ ದೇವ ಮಹಾಪ್ರಸಾದ ! ನಿಮ್ಮಡಿಗಳೆಂದಂತೆಯಲ್ಲದೆ ಎನಗೆ ಬೇರೆ ಸ್ವತಂತ್ರವುಂಟೆ? ದರ್ಪಣದೊಳಗಣ ಪ್ರತಿಬಿಂಬವ ನೋಡುವ ಮುಖಕ್ಕೆ ಭಿನ್ನಭಾವವುಂಟೆ? ಚರಿಸಿ ಬಪ್ಪ ಅನಂತ ಸುಳುಹಿನೊಳಗೆ ನೀನೊಬ್ಬನೆ, ನಿನ್ನೊಳಗೆ ಅನಂತ ಸುಳುಹು ಅಡಗಿದವು. ನಿಮಗೆ ಮಾಡಿದ ಸಯದಾನವ ನಿಮಗೆ ನೀಡುವೆನು, ಅವಧರಿಸಬೇಕಯ್ಯಾ, ಕೂಡಲಸಂಗಮದೇವಾ.